
ಭಟ್ಕಳ: ಭಟ್ಕಳ ತಾಲೂಕಾ ರೈತ ಸಂಘದ ಅಧ್ಯಕ್ಷರಾಗಿ ಶಿರಾಲಿಯ ಹಿರೇಹಿತ್ತಲ ನಿವಾಸಿ ನ್ಯಾಯವಾದಿ ನಾರಾಯಣ ಮಾದೇವ ನಾಯ್ಕ ಇವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆರಿಯಪ್ಪ ಗಣಪತಿ ನಾಯ್ಕ ಅಧ್ಯಕ್ಷತೆಯಲ್ಲಿ ಸಿದ್ದಾಪುರದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ ಮಾದೇವ ನಾಯ್ಕ ಇವರನ್ನು ಹಾಗೂ ಉಪಾಧ್ಯಕ್ಷರಾಗಿ ವಿನಾಯಕ ಚಂದ್ರು ನಾಯ್ಕ ಇವರನ್ನು ನೇಮಕ ಮಾಡಲಾಗಿದೆ ಎಂದೂ ತಿಳಿಸಲಾಗಿದೆ.
