Tuesday, January 27, 2026
Homefloodsಕರಾವಳಿ ಭಾಗದಲ್ಲಿ ಮೂರು ದಿನ ಭಾರೀ  ಮಳೆ ಮುನ್ಸೂಚನೆ:ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮೂರು ದಿನ ಭಾರೀ  ಮಳೆ ಮುನ್ಸೂಚನೆ:ರೆಡ್ ಅಲರ್ಟ್ ಘೋಷಣೆ

ಕಾರವಾರ (Karwar) : ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ  ಭಾಗದಲ್ಲಿ ಮೂರು ದಿನಗಳಿಗೆ (ಮೇ 12ರಿಂದ 14ರವರೆಗೆ) ರೆಡ್‌ ಅಲರ್ಟ್ (Red Alert) ಇದೆ. ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ . ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ  ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24*7ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿದೆ.

ಸಾರ್ವಜನಿಕರು ಯಾವುದೇ ಅನಧಿಕೃತ/ವದಂತಿಗಳಿಗೆ ಕಿವಿಗೊಡಬಾರದು. ಮೂರು ದಿನಗಳ ಕಾಲ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸಬೇಕು. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಎಂದು ಸೂಚಿಸಲಾಗಿದೆ.

ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು. ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು. ಮೇಲಿನ ಅಂಶಗಳನ್ನು ಗುಡುಗು ಸಿಡಿಲು/ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಗೆ ಆಗತ್ಯವಿದ್ದಲ್ಲಿ ಮುಂಜಾಗ್ರತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು. ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು. ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು ಎಂದು ಸಲಹೆ ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಭಾಸ್ಕರ ನಾಯ್ಕ
ಭಾಸ್ಕರ ನಾಯ್ಕ
ಅನುಭವಿ ಪತ್ರಕರ್ತರು, 21 ವರ್ಷಗಳ ಅನುಭವ, ಭಟ್ಕಳ ಡೈರಿ, ಕೆನರಾ ವಿಜಯ, ಸಪ್ತಮುಖಿ, ವಿಜಯವಾಣಿ,ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಹಾಗೂ ವಿಸ್ತಾರ ನ್ಯೂಸ್ ಕನ್ನಡ ವಾಹಿನಿಯಲ್ಲಿ ವರದಿಗಾರಿಕೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments