Tuesday, January 27, 2026
Homeeducationಸರಕಾರಿ ಶಾಲೆಗಳ ದಸರಾ ರಜೆ ಅಕ್ಟೋಬರ್ 18ರವರೆಗೆ ವಿಸ್ತರಣೆ: ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ! ಖಾಸಗಿ...

ಸರಕಾರಿ ಶಾಲೆಗಳ ದಸರಾ ರಜೆ ಅಕ್ಟೋಬರ್ 18ರವರೆಗೆ ವಿಸ್ತರಣೆ: ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ! ಖಾಸಗಿ ಶಾಲಾ ಮಕ್ಕಳಿಗೆ ರಜೆಯಿಲ್ಲ.


ಬೆಂಗಳೂರು: ಜಾತಿ ಗಣತಿ ಕಾರ್ಯ ಪೂರ್ಣಗೊಳ್ಳದ ಕಾರಣ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಿದೆ. ಈ ಹಿಂದೆ ಅಕ್ಟೋಬರ್ 7ಕ್ಕೆ ಮುಕ್ತಾಯವಾಗಬೇಕಿದ್ದ ರಜೆಯನ್ನು ವಿಸ್ತರಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಶಿಕ್ಷಕರು ಜಾತಿ ಗಣತಿ ಸಮೀಕ್ಷೆಯಲ್ಲಿ ತೊಡಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ಈ ಮೂಲಕ ಅಕ್ಟೋಬರ್‌ 7 ಕ್ಕೆ ಮುಕ್ತಾಯವಾಗಬೇಕಿದ್ದ ರಜೆ ಅಕ್ಟೋಬರ್ 18ವರೆಗೂ ವಿಸ್ತರಣೆಯಾಗಿದೆ. ಇನ್ನು ಶಾಲೆಗಳು ಪುನರಾರಂಭವಾಗುವುದು ಅಕ್ಟೋಬರ್ 23ಕ್ಕೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಜಾತಿ ಗಣತಿ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಕೈಗೊಂಡಿದ್ದಾರೆ. ನಿಗದಿತ ಕಾಲಾವಧಿಯಲ್ಲಿ ಜಾತಿ ಗಣತಿ ಕಾರ್ಯ ಪೂರ್ಣಗೊಂಡಿಲ್ಲ. ಗಣತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ.

ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ 8 ವರ್ಕಿಂಗ್‌ ಡೇಸ್‌ ರಜೆ ಘೋಷಿಸಲಾಗಿದೆ. ಜತೆಗೆ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿಯನ್ನು ನಡೆಸಿ ಸರಿದೂಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಖಾಸಗಿ ಶಾಲಾ ಮಕ್ಕಳಿಗೆ ಎಂದಿನಂತೆ ಶಾಲೆ
ದಸರಾ ರಜೆ ವಿಸ್ತರಣೆಯು ಕೇವಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ಅನ್ವಯವಾಗಲಿದ್ದು, ಖಾಸಗಿ ಶಾಲೆಗಳು ಆಯಾ ಸಂಸ್ಥೆಗಳ ಸೂಚನೆಯಂತೆ ನಡೆಯಲಿವೆ.

ಭಾಸ್ಕರ ನಾಯ್ಕ
ಭಾಸ್ಕರ ನಾಯ್ಕ
ಅನುಭವಿ ಪತ್ರಕರ್ತರು, 21 ವರ್ಷಗಳ ಅನುಭವ, ಭಟ್ಕಳ ಡೈರಿ, ಕೆನರಾ ವಿಜಯ, ಸಪ್ತಮುಖಿ, ವಿಜಯವಾಣಿ,ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಹಾಗೂ ವಿಸ್ತಾರ ನ್ಯೂಸ್ ಕನ್ನಡ ವಾಹಿನಿಯಲ್ಲಿ ವರದಿಗಾರಿಕೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments